".

Header Ads

ಅರಬೈಲ್ ಘಟ್ಟದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಚಾಲಕ ಸಜೀವ ದಹನ

 


ತಾಲೂಕಿನ ಅರಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಚಲಿಸುತ್ತಿದ್ದ ಕಾರೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಚಾಲಕ ಸಜೀವ ದಹನವಾಗಿರುವ ಭೀಕರ ಘಟನೆ ಏ. 8ರ ಬುಧವಾರ ನಡೆದಿದೆ.

 
ಹುಬ್ಬಳ್ಳಿಯಿಂದ ಅಂಕೋಲಾದತ್ತ ಸಾಗುತ್ತಿದ್ದ ವೋಕ್ಸ್‌ವ್ಯಾಗನ್ ಕಂಪನಿಯ ಕಾರು, ತಾಲೂಕಿನ ತಾಳಿಕುಂಬ್ರಿ ಬಸ್ ತಂಗುದಾಣದ ಬಳಿ ತಲುಪುತ್ತಿದ್ದಂತೆ ಈ ದುರಂತ ಸಂಭವಿಸಿದೆ. ಚಲಿಸುತ್ತಿದ್ದಂತೆಯೇ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಬೆಂಕಿಯ ಜ್ವಾಲೆ ಇಡೀ ಕಾರನ್ನು ಆವರಿಸಿದೆ.

ಕಾರಿನೊಳಗೆ ಸಿಲುಕಿಕೊಂಡಿದ್ದ ಚಾಲಕ ಹೊರಬರಲಾಗದೆ ಬೆಂಕಿಗೆ ಆಹುತಿಯಾಗಿದ್ದಾರೆ. ಚಾಲಕನ ಗುರುತು ಪತ್ತೆಹಚ್ಚುವುದು ಸದ್ಯಕ್ಕೆ ಕಷ್ಟಸಾಧ್ಯವಾಗಿದೆ.ವಿಷಯ ತಿಳಿದ ತಕ್ಷಣ ಯಲ್ಲಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ಶಾರ್ಟ್ ಸರ್ಕ್ಯೂಟ್ ಅಥವಾ ಇಂಜಿನ್‌ನಲ್ಲಿನ ತಾಂತ್ರಿಕ ದೋಷ ಕಾರಣವೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತರ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.

Powered by Blogger.