".

Header Ads

ಕುಂದಾಪುರ: ಅಪಘಾತದಲ್ಲಿ ಮೃತಪಟ್ಟಿದ್ದ ಮಹಿಳೆಯ ಚಿನ್ನಾಭರಣ ಕಳವು; 24 ಗಂಟೆಯೊಳಗೆ ಆರೋಪಿಯ ಬಂಧನ


 ಬೈಂದೂರು ತಾಲೂಕಿನ ಕೊಲ್ಲೂರು ಗ್ರಾಮದ ವ್ಯಾಪ್ತಿಯ ದಳಿಯಲ್ಲಿ ಮೇ 17 ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕೇರಳದ ಇಬ್ಬರು ಮಹಿಳಾ ಯಾತ್ರಿಕರು ಮೃತಪಟ್ಟಿದ್ದರು. ಈ ಘಟನೆಯ ಬೆನ್ನಲ್ಲೇ, ಮೃತ ಮಹಿಳೆಯೊಬ್ಬರ ದೇಹದಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಕೊಲ್ಲೂರು ಪೊಲೀಸರು ಕೇವಲ 24 ಗಂಟೆಗಳಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Powered by Blogger.