ಚೀನಾದ ಕಲ್ಲಿದ್ದಲು ಗಣಿಯಲ್ಲಿ ಅನಿಲ ಸ್ಫೋಟ: 82 ಮಂದಿ ಸಾವು
ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಚೀನಾದಲ್ಲಿ ನಡೆದಿದೆ.
ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಶುಕ್ರವಾರ ಸಂಜೆ 7:29 ಕ್ಕೆ ಈ ಅವಘಡ ನಡೆದಿದೆ. ಆ ವೇಳೆ ಒಟ್ಟು 242 ಕಾರ್ಮಿಕರು ನೆಲದಡಿಯಿದ್ದರು. ಅವರಲ್ಲಿ ಹೆಚ್ಚಿನವರನ್ನು ಶನಿವಾರ ಬೆಳಗ್ಗೆ ಮೇಲ್ಮೈಗೆ ತರಲಾಗಿದೆ. ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ನಾಪತ್ತೆಯಾದ ಒಂಬತ್ತು ಜನರಿಗಾಗಿ ರಕ್ಷಣಾ ಸಿಬ್ಬಂದಿ ಶೋಧ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಎಲ್ಲಾ ಇಲಾಖೆಗಳು ಈ ಅವಘಡದಿಂದ ಪಾಠ ಕಲಿಯಬೇಕು. ಕೆಲಸದ ಸ್ಥಳದ ಸುರಕ್ಷತೆಯ ಬಗ್ಗೆ ಜಾಗರೂಕರಾಗಿರಬೇಕು. ದುರಂತಗಳು ಸಂಭವಿಸದಂತೆ ತಡೆಯಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಕರೆ ನೀಡಿದ್ದಾರೆ.
Post a Comment