ಮದ್ವೆಯಾದ ಒಂದೂವರೆ ತಿಂಗಳಲ್ಲೇ ನವವಿವಾಹಿತೆ ಸಾವು
ಮದುವೆಯಾದ ಕೇವಲ ಒಂದೂವರೆ ತಿಂಗಳಲ್ಲೇ ನವವಿವಾಹಿತೆಯೊಬ್ಬರು ಇಲಿ ಪಾಷಾಣ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ 24 ವರ್ಷ ಪ್ರಾಯದ ಅಶ್ವತಿ ಪಿ.ವಿ. ಮೃತಪಟ್ಟ ದುರ್ದೈವಿ.
ಅಶ್ವತಿ ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಇವರಿಗೆ ಕಳೆದ ಏಪ್ರಿಲ್ 5 ರಂದು ರೂಪೇಶ್ ಎಂಬುವವರೊಂದಿಗೆ ವಿವಾಹವಾಗಿತ್ತು. ಮದುವೆಯಾಗಿ ಅತ್ಯಂತ ಸಂತೋಷದಿಂದ ಇರಬೇಕಾಗಿದ್ದ ಯುವತಿ, ಮೇ 18 ರಂದು ಕಾಸರಗೋಡು ಪಟ್ಟಣದ ಮನೆಯಲ್ಲಿ ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.ಆಕೆಯ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿದ್ದರಿಂದ, ಅವರನ್ನು ತಕ್ಷಣವೇ ಕಣ್ಣೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರು ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಾಸರಗೋಡು ಪಟ್ಟಣ ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಶ್ವತಿ ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಮದುವೆಯಾದ ಕೆಲವೇ ದಿನಗಳಲ್ಲಿ ಈ ಘಟನೆ ನಡೆದಿರುವುದರಿಂದ ಎಲ್ಲಾ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Post a Comment