".

Header Ads

ಕಾರ್ಕಳ: ಇಸ್ಪೀಟ್ ಅಡ್ಡೆಗೆ ದಾಳಿ: 7 ಮಂದಿ ಆರೋಪಿಗಳ ಬಂಧನ

 


ಹೆಬ್ರಿ ತಾಲೂಕು ಹೊಸೂರು ಗ್ರಾಮದಲ್ಲಿ ಇಸ್ಪೀಟ್ ಜೂಜಾಟ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಕಾರ್ಕಳ ಉಪವಿಭಾಗದ ಪೊಲೀಸರು 7 ಮಂದಿಯನ್ನು ಬಂಧಿಸಿದ್ದಾರೆ.

ವಿಜೇಶ್ ಕುಮಾರ(40), ದಸ್ತಗೀರ್(33), ರೋಹಿತ್(34), ವಿಜಯ (39), ಮಹೇಶ್ (26), ಕಿಶೋರ್ ಕುಮಾರ್ (46) ಹಾಗೂ ಸಂತೋಷ್ ಆಚಾರ್ಯ(35) ಬಂಧಿತರು. 

ಕಾರ್ಕಳ ವೃತ್ತದ ವೃತ್ತ ನಿರೀಕ್ಷಕರಾದ ಸಂದೀಪ್ ಜಿ.ಎಸ್ ಅವರ ನೇತೃತ್ವದಲ್ಲಿ ಸಿಬ್ಬಂದಿ ದಾಳಿ ನಡೆಸಿದ್ದು, ಚಪ್ಪರ ಹಾಕಿ ಟರ್ಪಾಲ್ ಅಳವಡಿಸಿ, ವಿದ್ಯುತ್ ಬೆಳಕಿನ ವ್ಯವಸ್ಥೆ ಮಾಡಿಕೊಂಡು ಜೂಜಾಟ ನಡೆಯುತ್ತಿದ್ದ ಸ್ಥಳವನ್ನು ಪತ್ತೆಹಚ್ಚಲಾಗಿದೆ. 

ದಾಳಿಯ ವೇಳೆ ರೂ. 23,970 ನಗದು, 35,000 ರೂ ಮೌಲ್ಯದ 5 ಮೊಬೈಲ್ ಫೋನ್‌ಗಳು, ಇಸ್ಪೀಟ್ ಕಾರ್ಡ್‌ಗಳು, ಟೇಬಲ್, ಕುರ್ಚಿಗಳು, ಬ್ಯಾಟರಿ ಹಾಗೂ ಅದರ ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ಜೂಜಾಟಕ್ಕೆ ಬಳಸಿದ್ದ 3 ಕಾರುಗಳು, 2 ಮೋಟಾರ್ ಸೈಕಲ್ ಮತ್ತು 1 ಸ್ಕೂಟರ್ ಕೂಡ ಜಪ್ತಿ ಮಾಡಲಾಗಿದೆ. ಒಟ್ಟು ವಶಪಡಿಸಿಕೊಂಡ ಸ್ವತ್ತುಗಳ ಅಂದಾಜು ಮೌಲ್ಯ 13,07,370 ರೂ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Powered by Blogger.