ಪಳ್ಳಿ: ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ರಾಮಕೃಷ್ಣ ಶೆಟ್ಟಿ ನಿಧನ
ನೀರೆ ಬೈಲೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ, ನೀರೆ ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯ, ಉದ್ಯಮಿ ರಾಮಕೃಷ್ಣ ಶೆಟ್ಟಿ (70 ವ) ಅವರು ಜು. 9ರಂದು ಬೆಳಿಗ್ಗೆ ಮಣಿಪಾಲ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ರಾಮಕೃಷ್ಣ ಅವರು ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದರು. ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಇವರು ಸೇವಾ ಸಂಘದ ಮಾಜಿ ಅಧ್ಯಕ್ಷರು ಹಾಗೂ ನಿರ್ದೇಶಕರಾದ ಶ್ರೀ ಎನ್ ರಾಮಕೃಷ್ಣ ಶೆಟ್ಟಿ ಸದ್ರಿ ಸಂಸ್ಥೆಯಲ್ಲಿ ಎರಡು ವರ್ಷಗಳ ಕಾಲ ಅಧ್ಯಕ್ಷರಾಗಿ ಹಾಗೂ 10 ವರ್ಷಗಳ ಕಾಲ ನಿರ್ದೇಶಕರಾಗಿ ಸುದೀರ್ಘ ಸೇವೆಯನ್ನು ಸಲ್ಲಿಸಿದ್ದಾರೆ.
ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದ ರಾಮಕೃಷ್ಣ ಅವರು ಮೈತ್ರಿ ಸೇವಾ ಸಂಘದ ಅಧ್ಯಕ್ಷರಾಗಿ, ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸಂಜೆ 5 ಗಂಟೆಗೆ ನೀರೆ ಬೊಟ್ಟ ಮನೆಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.

Post a Comment