ಉಡುಪಿ ಜಿಲ್ಲೆಯಾದ್ಯಂತ ಬೆಳಗ್ಗಿನಿಂದಲೇ ನಿರಂತರವಾಗಿ ಬಿರುಸಿನ ಮಳೆ ಸುರಿಯುತ್ತಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಮಳೆ ಮುಂದುವರಿದಿದ್ದು, ಕರಾವಳಿ ಭಾಗದ ಜನರು ಹಾಗೂ ಮೀನುಗಾರರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ.
ಸಮುದ್ರದಲ್ಲಿ ಗಂಟೆಗೆ 40ರಿಂದ 55 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಯಾವುದೇ ಕಾರಣಕ್ಕೂ ಕಡಲಿಗೆ ಇಳಿಯಬಾರದು. ಆಳ ಸಮುದ್ರ ಮೀನುಗಾರಿಕೆಯನ್ನು ಆರಂಭಿಸಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
ತಗ್ಗು ಪ್ರದೇಶಗಳಲ್ಲಿ ವಾಸಿಸುವ ನಿವಾಸಿಗಳು ಹೆಚ್ಚಿನ ಎಚ್ಚರಿಕೆ ವಹಿಸಬೇಕು. ಮಳೆ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇರುವುದರಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತ ಹಾಗೂ ಹವಾಮಾನ ಇಲಾಖೆ ಮನವಿ ಮಾಡಿವೆ.
Post a Comment