ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆ ವೇಳೆ ಹಿಜಾಬ್ ಹಾಕುವಂತಿಲ್ಲ-ಪ್ರಿಯಾಂಕ್ ಖರ್ಗೆ ಸ್ಪಷ್ಟನೆ
ಕರ್ನಾಟಕದ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆ ಆಗಸ್ಟ್ 2 ರಂದು ಲಿಖಿತ ಪರೀಕ್ಷೆ ನಡೆಯಲಿದೆ. ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ ರಾಜ್ಯದ ಕಾನ್ಸ್‌ಟೇಬಲ್ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ರಾಜ್ಯ ಗೃಹ ಸಚಿವ ಪ್ರಿಯಾಂಕ ಖರ್ಗೆ ಸ್ಪಷ್ಟನೆಯೊಂದನ್ನು ನೀಡಿದ್ದಾರೆ. ಈ ಪೈಕಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪೊಲೀಸ್ ಕಾನ್ಸ್‌ಸ್ಟೇಬಲ್ ಲಿಖಿತ ಪರೀಕ್ಷೆಯಲ್ಲಿ ಹಿಜಾಬ್ ಹಾಕಲು ಅವಕಾಶವಿಲ್ಲ. ಧಾರ್ಮಿಕ ಉಡುಪುಗಳ ಕುರಿತು ಗೊಂದಲ ಆಗದಂತೆ ಮೊದಲೇ ನೋಡಿಕೊಳ್ಳಲಾಗುವುದು ಎಂದು ಪ್ರಿಯಾಂಕಾ ಖರ್ಗೆ ಸ್ಪಷ್ಟ ಪಡಿಸಿದ್ದಾರೆ. ಪರೀಕ್ಷೆ ಸಮಯದಲ್ಲಿ ಯಾವು ಉಡುಪು ಹಾಕಬಹುದು ಯಾವ ಉಡುಪು ಹಾಕಬಾರದು ಎಂದು ಪ್ರವೇಶ ಪತ್ರದಲ್ಲಿ ಹಾಕಿರುತ್ತೇವೆ.
24 ಗಂಟೆ ಮುಂಚೆ ಪರೀಕ್ಷಾ ಕೊಠಡಿಗಳನ್ನು ಸ್ಯಾನಿಟೈಸೇಶನ್ ಮಾಡಲಾಗುತ್ತದೆ. ಮೊಬೈಲ್ ಬಳಕೆಯನ್ನು ನಿಯೋಜಿತ ಸಿಬ್ಬಂದಿ ಕೂಡಾ ಮಾಡುವಂತಿಲ್ಲ. ಜನಿವಾರ, ಶಿವದಾರ, ಉಡುದಾರ, ಮಾಂಗಲ್ಯ ಸರ, ಮೂಗುತಿ, ಕುಂಕುಮ ಉಂಗುರ ತಾಯತಾ ಹಾಕುವುದು ಸೇರಿದಂತೆ ಎಲ್ಲಾ ವಸ್ತುಗಳ ಬಳಕೆ ಕುರಿತು ಮೊದಲೇ ತಿಳಿಸಲಾಗುವುದು. ಕೊನೆ ಕ್ಷಣದ ಗೊಂದಲಕ್ಕೆ ಯಾವುದೇ ಅವಕಾಶ ಇಲ್ಲದಂತೆ ನೋಡಿಕೊಳ್ಳಲಾಗುವುದು. ಎರಡುವರೆ ಗಂಟೆ ಮುಂದೆ ಬಂದು ಇವುಗಳನ್ನು ಚೆಕ್ ಮಾಡಿಸಲು ಅವಕಾಶ ನೀಡಲಾಗುತ್ತದೆ ಎಂದು ಹೇಳಿದ್ದಾರೆ

Post a Comment