".

Header Ads

ಉಡುಪಿ: ಗುಂಡಿನ ದಾಳಿಗೆ ಉಡುಪಿ ಕಾಂಗ್ರೆಸ್ ಮುಖಂಡ ಬಲಿ

 

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿಯಲ್ಲಿ ಶುಕ್ರವಾರ ಮಧ್ಯಾಹ್ನ ಹಾಡಹಗಲೇ ಭೀಕರ ಗುಂಡಿನ ದಾಳಿ ನಡೆದಿದ್ದು, ಕಾಂಗ್ರೆಸ್ ಮುಖಂಡ, ಮುದರಂಗಡಿ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ಹಾಗೂ ಉದ್ಯಮಿ ಡೇವಿಡ್ ಡಿಸೋಜಾ (55) ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿದ್ದಾರೆ.
ಮುದರಂಗಡಿ ಪೇಟೆಯಲ್ಲಿರುವ ಡೇವಿಡ್ ಡಿಸೋಜಾ ಅವರ ಕಚೇರಿ ಬಳಿ ಮಧ್ಯಾಹ್ನ ಸುಮಾರು 3 ಗಂಟೆಗೆ ಈ ಘಟನೆ ಸಂಭವಿಸಿದೆ. ಬೈಕ್‌ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಅತ್ಯಂತ ಹತ್ತಿರದಿಂದ ಅವರ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಒಂದು ಗುಂಡು ಡೇವಿಡ್ ಅವರ ಹಣೆಗೆ ತಗುಲಿದ್ದರೆ, ಇನ್ನು ಎರಡು ಗುಂಡುಗಳು ಕೈಗೆ ಬಿದ್ದಿವೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯುವ ದಾರಿಯಲ್ಲಿ ಅವರು ಮೃತಪಟ್ಟಿದ್ದಾರೆ. ಮೃತದೇಹವನ್ನು ಮೊದಲು ಶಿರ್ವ ಸಮುದಾಯ ಆರೋಗ್ಯ ಕೇಂದ್ರಕ್ಕೆ ತಂದು, ಬಳಿಕ ಮರಣೋತ್ತರ ಪರೀಕ್ಷೆ ಹಾಗೂ ಮುಂದಿನ ಪ್ರಕ್ರಿಯೆಗಳಿಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ರವಾನಿಸಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಪಡುಬಿದ್ರೆ ಹಾಗೂ ಶಿರ್ವ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಹರಿರಾಮ್ ಶಂಕರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ದುಷ್ಕರ್ಮಿಗಳ ಬಂಧನಕ್ಕೆ ವ್ಯಾಪಕ ಬಲೆ ಬೀಸಲಾಗಿದೆ.

ಮುದರಂಗಡಿಯ ಪ್ರಿನ್ಸ್ ಬಾರ್‌ನ ಮಾಲಕ, ಅದಾನಿ ಪವರ್‌ನ ಗುತ್ತಿಗೆದಾರರಾಗಿ, ಬಸ್ ಮಾಲಕರಾಗಿದ್ದ ಡೇವಿಡ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಸಕ್ರೀಯರಾಗಿದ್ದರು. ಮುದರಂಗಡಿ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
Powered by Blogger.