ಉಡುಪಿ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಮೃತ್ಯು
ಹೆಬ್ರಿಯಿಂದ ಬ್ರಹ್ಮಾವರ ಮಾರ್ಗವಾಗಿ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಹುತ್ತುರ್ಕೆ ಬಳಿ ಆ.7ರ ಶುಕ್ರವಾರ ಸಂಜೆ 5.30ರ ಸುಮಾರಿಗೆ ಸಂಭವಿಸಿದೆ ಎನ್ನಲಾಗಿದೆ.
ಮೃತರನ್ನು ಹೆಬ್ರಿ ಸಂತೆಕಟ್ಟೆ ಸದಾನಂದ ನಾಯಕ್(55) ಎಂದು ಗುರುತಿಸಲಾಗಿದೆ.
ಮರ
ಬಿದ್ದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕನ ಮೃತದೇಹ ಕಾರಿನೊಳಗೆ
ಸಿಲುಕಿಕೊಂಡಿದೆ. ಘಟನೆ ಬಳಿಕ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಧಾವಿಸಿದ್ದು, ಕಾರಿನ
ಮೇಲಿದ್ದ ಮರವನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದರು.
ಮರ ತೆರವುಗೊಳಿಸಿದ
ಬಳಿಕವಷ್ಟೇ ಮೃತದೇಹವನ್ನು ಕಾರಿನಿಂದ ಹೊರತೆಗೆಯಲು ಸಾಧ್ಯವಾಗಲಿದೆ ಎಂದು
ತಿಳಿದುಬಂದಿದೆ. ಘಟನೆಯಿಂದಾಗಿ ಈ ಮಾರ್ಗದಲ್ಲಿ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಯಿತು.

Post a Comment